ವಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಿ.ಯದುಪತಿ ಗೌಡರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ ) ಬೆಳ್ತಂಗಡಿ ಇದರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನ ಹಳೇಕೋಟೆ ಬೆಳ್ತಂಗಡಿಯಲ್ಲಿ ನಡೆಯಿತು.

ನಿವೃತ್ತ ಪ್ರಾಂಶುಪಾಲರಿಗೆ ಹಾಗೂ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಯುವ ವೇದಿಕೆ ಅಧ್ಯಕ್ಷ ಚಂದ್ರ ಕಾಂತ ನಿಡ್ಡಾಜೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಮಾರಂಭದಲ್ಲಿ ವಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಿ.ಯದುಪತಿ ಗೌಡ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಅವರು ನಡೆದು ಬಂದ ಹಾದಿಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆ ಬಗ್ಗೆ ತಮ್ಮ ಮಾತುಗಳಲ್ಲಿ ಪ್ರಸ್ತುತಪಡಿಸಿದರು. ಪ್ರಾಂಶುಪಾಲರ ಸಂಘದ ವತಿಯಿಂದ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪಡೆದ ವಾಣಿ ಕಾಲೇಜಿನ ಮಹಾಬಲ ಗೌಡ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಶಸ್ತಿ ಪಡೆದ ಕೊಯ್ಯೂರಿನ ವಿಜಯ ಕುಮಾರ್ ಹಾಗೂ ಉಜಿರೆಯ ಜಯ ಕೆ ಇವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ಇವರು ವಹಿಸಿ ನಮ್ಮ ಸಮಾಜದ ಸಾಧನೆ ಮಾಡಿದ ವ್ಯಕ್ತಿಗಳನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ. ಇಂತಹ ಕಾರ್ಯಕ್ರಮ ನಮ್ಮ ಸಮಾಜದ ಇನ್ನಷ್ಟು ಬಂಧುಗಳು ಸಾಧನೆ ಮಾಡಲು ಸ್ಫೂರ್ತಿಯಾಗಬೇಕು ಎಂಬ ಉದ್ದೇಶದಿಂದ ನಾವು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ಎಂದು ತಮ್ಮ ಅಧ್ಯಕ್ಷೀಯ ಭಾಷಣ ದಲ್ಲಿ ನುಡಿದರು.ಮಂದಿನ ದಿನಗಳಲ್ಲಿ ನಮ್ಮ ಸಮಾಜದ ಬಂಧುಗಳಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವವರಿದ್ದೇವೆ ಎಂದು ತಮ್ಮ ಅಧ್ಯಕ್ಷ ನುಡಿಗಳನ್ನಾಡಿದರು.ವೇದಿಕೆಯಲ್ಲಿ ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷರಾದ ಗೀತಾ ರಾಮಣ್ಣ ಗೌಡ ಕೊಯ್ಯೂರು ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಸೀತಾರಾಮ ಬೆಳಾಲು, ಪ್ರಗತಿ ಸ್ವ-ಸಹಾಯ ಸಂಘ ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷರಾದ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು.ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇದರ ಸಂಚಾಲಕರಾದ ಸೀತಾರಾಮ ಗೌಡ ಬೆಳಾಲು ಕಾರ್ಯಕ್ರಮದ ಸ್ವಾಗತ ಭಾಷಣವನ್ನು ನೆರವೇರಿಸಿಕೊಟ್ಟರು. ಪ್ರಗತಿ ಸ್ವ- ಸಹಾಯ ಸಂಘ ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷರಾದ ಮೋಹನ ಗೌಡ ಕೊಯ್ಯೂರು ಇವರು ಪ್ರಾಸ್ತಾವಿಕವಾಗ ಮಾತನಾಡಿದರು. ಛಾಯಾಗ್ರಾಹಕರಾಗಿ ಯುವ ವೇದಿಕೆಯ ಉಪಾಧ್ಯಕ್ಷರಾದ ನಿತಿನ್ ಕಲ್ಮಂಜ ಸಹಕರಿಸಿದರು.ಈ ಸಂಧರ್ಭ ಯುವ ವೇದಿಕೆಯ ಸಲಹೆಗಾರ ಮೋಹನ ಗೌಡ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ, ಕೋಶಾಧಿಕಾರಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿ ತೀಕ್ಷಿತ್ ದಿಡುಪೆ, ಉಪಾಧ್ಯಕ್ಷ ನಿತಿನ್ ಕಲ್ಮಂಜ, ಕಾನೂನು ಸಲಹೆಗಾರ ನವೀನ್ ನಿಡ್ಲೆ, ಸಂಘಟನಾ ಕಾರ್ಯದರ್ಶಿ ಪ್ರಮೋದ್ ದಿಡುಪೆ, ಯಶವಂತ ಡೆಚ್ಚಾರು, ಭರತ್ ಪುದುವೆಟ್ಟು, ಸತೀಶ್ ಬೆಳಾಲು, ಅಕ್ಷಯ್ ಉಜಿರೆ, ಪ್ರಸಾದ್ ಚಾರ್ಮಾಡಿ, ಮಂಜುನಾಥ ಚಾರ್ಮಾಡಿ, ಸಚಿನ್ ಕನ್ಯಾಡಿ, ಶಿವಪ್ರಸಾದ್ ಕಲ್ಮಂಜ, ನಿತೇಶ್ ಬೆಳ್ತಂಗಡಿ, ಸೀತಾರಾಮ್ ಬೆಳಾಲು, ಧನಂಜಯ್ ಕುಮಾರ್ ಪೆರ್ಲ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾರಾಮಣ್ಣ ಗೌಡ, ಕಾರ್ಯದರ್ಶಿ ಲೀಲಾ ಬೆಳಾಲು, ದಯಾಮಣಿ ಕೊಯ್ಯೂರು, ಮೀನಾಕ್ಷಿ ಮಹಾಬಲ ಗೌಡ ಕುವೆಟ್ಟು ಮೊದಲಾದವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಧನ್ಯವಾದವನ್ನು ಯುವ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ ನೆರವೇರಿಸಿದರು. ಕಾರ್ಯಕ್ರಮದ ನಿರೂಪಣೆ ಯನ್ನು ಮಹೇಶ್ ಬೆಳಾಲು ನಿರ್ವಹಿಸಿದರು.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 17 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 42 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 37 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 59 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ