ಕೊರೋನಾ 2ನೇ ಅಲೆ ಎಫೆಕ್ಟ್ : ವಿಧಾನಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ ಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ಹಿನ್ನಲೆಯಲ್ಲಿ, ಕೊರೋನಾ ನಿಯಂತ್ರಣ ತಡೆಗಾಗಿ ಇದೀಗ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಭಂದ ವಿಧಿಸಿದೆ. ಈ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿದೆ.

ಈ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕೊರೋನಾ ವೈರಸ್ 2ನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ, ಪ್ರತಿಯೊಂದು ಹಂತದಲ್ಲಿಯೂ ಸಹ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ.

ಸಚಿವರುಗಳ ಕಚೇರಿ ಮತ್ತು ಸಚಿವಾಲಯದ ಬಹುತೇಕ ಕಚೇರಿಗಳಲ್ಲಿ ದಿನನಿತ್ಯ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಕಾರಣದಿಂದಾಗಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಆಡಳಿತದ ಹಿತದೃಷ್ಠಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸುವ ಅನಿವಾರ್ಯತೆ ಇದೆ.

ಆದುದರಿಂದ ಸದರಿ ಕಟ್ಟಡಗಳಿಗೆ ಮುಖ್ಯಮಂತ್ರಿಯವರ ಸಚಿವಾಲಯ, ಸಚಿವರು ಹಾಗೂ ಸಚಿವಾಲಯ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾದ ಭೇಟಿಯನ್ನು ಹೊರತುಪಡಿಸಿ, ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಷವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧಿಸಿ ಆದೇಶಿಸಿದ್ದಾರೆ.

ಇನ್ನೂ ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಲು, ಸಂಪರ್ಕಿಸಲು ನಿರ್ಧಿಷ್ಟ ಉದ್ದೇಶವನ್ನು ಹೊಂದಿ, ಮುಖ್ಯಮಂತ್ರಿಯವರ ಸಚಿವಾಲಯ, ಸಚಿವರು ಹಾಗೂ ಸಚಿವಾಲಯದ ಇಲಾಖೆಗಳ ಹಿರಿಯ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆದಿರುವ ಸಾರ್ವಜನಿಕರಿಗೆ ಮಾತ್ರ, ಪೂರ್ವಾನುಮತಿ ಪತ್ರಗಳನ್ನು ಪರಿಶೀಲಿಸಿ, ಮಧ್ಯಾಹ್ನ 3.30 ಗಂಟೆಯ ನಂತ್ರವಷ್ಟೇ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಮಿತಿಗೊಳಿಸಲಾದ ಪ್ರವೇಶವನ್ನು ಕಲ್ಪಿಸಲು ಅವಕಾಶ ಮಾಡಿಕೊಡಲಾಗಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

    Spread the love

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 20 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 56 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 20 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 61 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 85 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ